Karnataka Times
Trending Stories, Viral News, Gossips & Everything in Kannada

Digital Crime: 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಬ್ಯಾನ್ ಮಾಡಿದ ಸರ್ಕಾರ, ಕಾರಣ ಇಲ್ಲಿದೆ.

advertisement

ವಾಟ್ಸಾಪ್‌ ಭಾರತದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ಒಟ್ಟು 70 ಲಕ್ಷ ಖಾತೆಗಳನ್ನು ಬ್ಯಾನ್‌ ಮಾಡಿರುವುದಾಗಿ ಹೇಳಿದೆ. ಭಾರತದ ಐಟಿ ನಿಯಮಗಳ ಅನ್ವಯ ಈ ಕ್ರಮ ಕೈಗೊಂಡಿರುವುದಾಗಿ ವಾಟ್ಸಾಪ್‌ ಹೇಳಿಕೊಂಡಿದೆ. ಇದು ಸೆಪ್ಟೆಂಬರ್ 1 ರಿಂದ 30 ರ ನಡುವಿನ ವರದಿ ಎಂದು ವಾಟ್ಸಾಪ್‌ ಹೇಳಿಕೊಂಡಿದೆ. ಹಾಗಾದ್ರೆ ವಾಟ್ಸಾಪ್‌ ಈ ಪರಿಯ ಅಕೌಂಟ್‌ಗಳನ್ನು ಬ್ಯಾನ್‌ ಮಾಡಿರುವುದಕ್ಕೆ ಕಾರಣವೇನು ಎಂದು ನೋಡೋಣ.

ಕೆಲ ದಿನಗಳ ಹಿಂದಷ್ಟೇ ಹಣಕಾಸು ಸೇವೆಗಳ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೈಬರ್ ವಂಚನೆಯನ್ನು ಪರಿಶೀಲಿಸಲು ಏಜೆನ್ಸಿಗಳ ನಡುವೆ ಸಮನ್ವಯತೆಯನ್ನು ಹೇಗೆ ಖಚಿತಪಡಿಸಿಕೊಳ್ಳುವುದು ಎಂಬುದರ ಕುರಿತು ಚರ್ಚಿಸಲಾಗಿತ್ತು. ಮೋಸ ಹೋಗುವ ಗ್ರಾಹಕರನ್ನು ವಂಚನೆಯಿಂದ ರಕ್ಷಿಸಲು ಸಮಾಜ ವಂಚನೆಯ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಜೋಶಿ ಹೇಳಿದ್ದರು.

ಈ ಸಭೆಯಲ್ಲಿ, ಭಾರತೀಯ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್ (Indian Cyber Crime Co-Ordination Center) ರಾಷ್ಟ್ರೀಯ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ನಲ್ಲಿ ವರದಿಯಾಗಿರುವ ಡಿಜಿಟಲ್ ಪಾವತಿ ವಂಚನೆಗಳ (Digital Crime) ಇತ್ತೀಚಿನ ಅಂಕಿಅಂಶಗಳ ಕುರಿತು ಪ್ರಸ್ತುತಿಯನ್ನು ಮಾಡಿದೆ, ಅಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪಟ್ಟಿ ಮಾಡಿದೆ.

ಡಿಜಿಟಲ್ ವಂಚನೆಗಳನ್ನು ಪರಿಶೀಲಿಸಲು, ಅನುಮಾನಾಸ್ಪದ ವಹಿವಾಟುಗಳ ಖಾತೆಯ 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಸರ್ಕಾರವು ಅಮಾನತುಗೊಳಿಸಿದೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ವಿವೇಕ್ ಜೋಶಿ (Vivek Joshi) ಮಂಗಳವಾರ ಪ್ರಕಟಿಸಿದ್ದಾರೆ. ಹಣಕಾಸು ಸೈಬರ್ ಭದ್ರತೆ ಮತ್ತು ಹೆಚ್ಚುತ್ತಿರುವ ಡಿಜಿಟಲ್ ಪಾವತಿ ವಂಚನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲು ಸಭೆಯಿಂದ ಹೊರಬಂದ ಜೋಶಿ, ಈ ವ್ಯವಸ್ಥೆ ಮತ್ತು ಪ್ರಕ್ರಿಯೆಗಳನ್ನು ಬಲಪಡಿಸಲು ಇನ್ನು ಹೆಚ್ಚಿನ ಸಭೆಗಳು ನಡೆಯಲಿವೆ, ಮುಂದಿನ ಸಭೆಯನ್ನು ಜನವರಿಯಲ್ಲಿ ನಿಗದಿಪಡಿಸಲಾಗಿದೆ ಎಂದು ಹೇಳಿದರು.

advertisement

ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ (AEPS) ವಂಚನೆಗೆ ಸಂಬಂಧಿಸಿದಂತೆ, ಈ ಸಮಸ್ಯೆಯನ್ನು ಪರಿಶೀಲಿಸಲು ಮತ್ತು ಡೇಟಾ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲ ರಾಜ್ಯಗಳನ್ನು ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ. ವ್ಯಾಪಾರಿಗಳ ಕೆವೈಸಿ ಪ್ರಮಾಣೀಕರಣಕ್ಕಾಗಿ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಹಣಕಾಸು ಸೇವೆಗಳ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಏಜೆನ್ಸಿಗಳ ನಡುವೆ ಸಮನ್ವಯವನ್ನು ಹೇಗೆ ಖಚಿತಪಡಿಸಿಕೊಳ್ಳುವುದು ಎಂಬುದರ ಕುರಿತು ಚರ್ಚಿಸಲಾಗಿದೆ.ಮೋಸ ಹೋಗುವ ಗ್ರಾಹಕರನ್ನು ವಂಚನೆಯಿಂದ ರಕ್ಷಿಸಲು ಸಮಾಜ ವಂಚನೆಯ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಜೋಶಿ ಹೇಳಿದ್ದಾರೆ.

ಸಭೆಯಲ್ಲಿ, ಭಾರತೀಯ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್ ರಾಷ್ಟ್ರೀಯ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್  ನಲ್ಲಿ ವರದಿಯಾಗಿರುವ ಡಿಜಿಟಲ್ ಪಾವತಿ ವಂಚನೆಗಳ ಇತ್ತೀಚಿನ ಅಂಕಿ ಅಂಶಗಳ ಕುರಿತು ಮಾಹಿತಿಯನ್ನು ನೀಡಿದೆ, ಅಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ವಾಟ್ಸಪ್ ಖಾತೆಗಳನ್ನು ರದ್ದು ಮಾಡಲಾಗಿದೆ.

ಇನ್ನು ವಂಚನೆಗಳನ್ನು ತಡೆಗಟ್ಟಬಹುದಾದ ಉತ್ತಮ ಮಾರ್ಗವೆಂದರೆ ಸಮಾಜದಲ್ಲಿ ಅದರ ಕುರಿತಾಗಿ ಜಾಗೃತೆ ಮೂಡಿಸುವುದು. ಇದರಿಂದ ಮೋಸಗಾರರಿಂದ ಗ್ರಾಹಕರನ್ನು ವಂಚನೆಯಿಂದ ರಕ್ಷಿಸಬಹುದು. ಆರ್ಥಿಕ ವ್ಯವಹಾರಗಳ ಇಲಾಖೆ, ವೈದ್ಯಕೀಯ ಇಲಾಖೆ, ಟೆಲಿಕಾಂ ಇಲಾಖೆ, ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಮತ್ತು ಭಾರತೀಯ ರಾಷ್ಟ್ರೀಯ ಪಾವತಿ ನಿಗಮದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman)ಅವರು ತಮ್ಮ ಸುರಕ್ಷತೆಯನ್ನು ಖಚಿತ ಪಡಿಸಿಕೊಳ್ಳಲು ಮತ್ತು ಸಿಸ್ಟಮ್ ಅನ್ನು ತಡೆಯಲು ಸೈಬರ್ ವಂಚನೆಯ ಬಗ್ಗೆ ಜನರಿಗೆ ಜಾಗೃತಿಯನ್ನು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

 

advertisement

Leave A Reply

Your email address will not be published.