Karnataka Times
Trending Stories, Viral News, Gossips & Everything in Kannada

ರಮ್ಯಾ ಜೊತೆ ಅಶ್ವಿನಿ ಹೇಗೆ ಮಾತಾಡುತ್ತಾರೆ ನೋಡಿ…ಕ್ಯೂಟ್ ವಿಡಿಯೋ

Advertisement

4ನೇ ಚೆಂದನವನದ ಫಿಲ್ಮ್‌ ಕ್ರಿಟಿಕ್ಸ್‌ (Filim Critics) ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವೂ ಬೆಂಗಳೂರಿನ (Banglore) ಖಾಸಗಿ ಹೋಟೆಲ್‌ ಒಂದರಲ್ಲಿ ನಡೆಯಿತು. ಹೌದು ಈ ಕಾರ್ಯಕ್ರಮದಲ್ಲಿ 2022ರಲ್ಲಿ ತೆರೆ ಕಂಡ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದ್ದು ರಿಷಬ್‌ ಶೆಟ್ಟಿ (Rishab Shetty) ನಿರ್ದೇಶಿಸಿ ನಟಿಸಿರುವ ಕಾಂತಾರ (Kantara) ಸಿನಿಮಾಗೆ 4 ಮತ್ತು ಪ್ರಶಾಂತ್‌ ನೀಲ್‌ (Prashanth Neel) ನಿರ್ದೇಶನದ ಕೆಜಿಎಫ್‌ 2 (KGF 2) ಚಿತ್ರಕ್ಕೆ 3 ವಿಭಾಗಗಳಲ್ಲಿ ಪ್ರಶಸ್ತಿಗಳು (Awards) ದೊರೆತಿರುವುದು ವಿಶೇಷ.

ಇನ್ನು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ (Ashwini Puneeth Rajkumar) ರಮ್ಯಾ (Ramya) ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ (Nagathihalli Chandra Sheakar) ರಾಜೇಂದ್ರ ಸಿಂಗ್‌ ಬಾಬು (Rajendra Singh Babu) ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಗೂ ಇನ್ನಿತರರು ಹಾಜರಿದ್ದರು.

Advertisement

ಹಾಗೇ ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿನಲ್ಲಿ ಅತ್ಯುತ್ತಮ ನಿರ್ಮಾಪಕ (ಡೆಬ್ಯು) ಸಂಚಾರಿ ವಿಜಯ್ (Sanchari Vijay) ಹೆಸರಿನಲ್ಲಿ ಅತ್ಯುತ್ತಮ ನಟ (ಡೆಬ್ಯು) ತ್ರಿಪುರಾಂಭ (Tripurambha) ಹೆಸರಿನಲ್ಲಿ ಅತ್ಯುತ್ತಮ ನಟಿ (ಡೆಬ್ಯು) ಕರಾಟೆ ಕಿಂಗ್‌ ಶಂಕರನಾಗ್ (Shankatnag) ಹೆಸರಿನಲ್ಲಿ ಅತ್ಯುತ್ತಮ ನಿರ್ದೇಶಕ (ಡೆಬ್ಯು) ಹಾಗೂ ಚಿತ್ರ ಸಾಹಿತಿ ಚಿ. ಉದಯ ಶಂಕರ್(Uday Shankar) ಹೆಸರಿನಲ್ಲಿ ಅತ್ಯುತ್ತಮ ಬರಹಗಾರ (ಡೆಬ್ಯು) ಸೇರಿದಂತೆ ಈ ಬಾರಿ 5 ವಿಶೇಷ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಅತ್ಯುತ್ತಮ ನಟಿ ಪ್ರಶಸ್ತಿಯು ಗಾಳಿಪಟ 2 ಚಿತ್ರಕ್ಕಾಗಿ ಶರ್ಮಿಳಾ ಮಾಂಡ್ರೆಗೆ (Sharmila Mandre)ದೊರೆತರೆ, ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು 777 ಚಾರ್ಲಿ (777 Charlie) ಚಿತ್ರಕ್ಕಾಗಿ ಕಿರಣ್ ರಾಜ್ ಕೆ ಪಡೆದಿದ್ದಾರೆ.
ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾಗಿದ್ದರೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ಕಾಂತರ’ದ ಕೈ ಸೇರಿದೆ. ಅತ್ಯುತ್ತಮ ಸಂಗೀತ ಕಾಂತಾರ ಚಿತ್ರಕ್ಕಾಗಿ ಅಜನೀಶ್ ಲೋಕನಾಥ್ ಪಡೆದುಕೊಂಡರೆ ಅತ್ಯುತ್ತಮ ಸ್ಟಂಟ್ ಪ್ರಶಸ್ತಿಯು ಕಾಂತಾರ ಸಿನಿಮಾದ ವಿಕ್ರಮ್ ಮೋರ್ ಅವರಿಗೆ ಸಂದಿದೆ. ಸದ್ಯ ಈ ಕಾರ್ಯಕ್ರಮದಲ್ಲಿ ಅಶ್ವಿನಿ ಮೇಡಂ ಹಾಗೂ ರಮ್ಯಾ ಹೇಗೆ ಕಾಣಿಸಿಲೊಂಡರು ಗೊತ್ತಾ? ಕೆಳಗಿನ ವಿಡಿಯೋ ನೋಡಿ.

Advertisement

Leave A Reply

Your email address will not be published.